alex Certify ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸಿಹಿ ಸುದ್ದಿ: ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ಸಂಸ್ಥೆ ಸಿಬ್ಬಂದಿಗೆ ಸಿಹಿ ಸುದ್ದಿ: ವರ್ಗಾವಣೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಕೆಎಸ್ಆರ್ಟಿಸಿ ಅಂತರ ನಿಗಮ ವರ್ಗಾವಣೆ ಅವಧಿ ವಿಸ್ತರಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ದರ್ಜೆ 3 ಮೇಲ್ವಿಚಾರಕೇತರ ಮತ್ತು ದರ್ಜೆ 4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಅ. 31ರವರೆಗೆ ವಿಸ್ತರಣೆ ಮಾಡಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶಿಸಿದ್ದಾರೆ.

ಈ ಹಿಂದೆ ಸೆ. 30ರ ಸಂಜೆ 5.30ರವರೆಗೆ ಆನ್ಲೈನ್ ಮೂಲಕ ವರ್ಗಾವಣೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ನೌಕರರಿಗೆ ಅನುಕೂಲವಾಗುವಂತೆ ಅಂತರ ನಿಗಮ ಸಾಮಾನ್ಯ ಮತ್ತು ಪರಸ್ಪರ ವರ್ಗಾವಣೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅ.ರ್ 31ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ. www.ksrtc.org/transfer ನಲ್ಲಿ ನೌಕರರು ವರ್ಗಾವಣೆ ಅರ್ಜಿ ಸಲ್ಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...