ಬೆಂಗಳೂರು: ಒಂದು ಕಾಲದಲ್ಲಿ ಭಾರಿ ನಷ್ಟ ಅನುಭವಿಸಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ-KSRTC ಇದೀಗ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಭಾಜನವಾಗಿದೆ.
world suatainability congress ನೀಡುವ 14ನೇ ಆವೃತ್ತಿಯ 18ನೇ ಪ್ರಶಸ್ತಿಯನ್ನು ಕೆ.ಎಸ್.ಆರ್.ಟಿ.ಸಿ ಪಡೆದುಕೊಂಡಿದೆ. ಈ ಮೂಲಕ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಕೆ.ಎಸ್.ಆರ್.ಟಿ.ಸಿ ಮುಡಿಗೇರಿದೆ.
ಕೆ.ಎಸ್.ಆರ್.ಟಿ.ಸಿ ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಡಾ.ಲತಾ ಟಿ.ಎಸ್ ಪ್ರಶಸ್ತಿ ಸಿಕರಿಸಿದ್ದಾರೆ.
ಹಳೇ ಬಸ್ ಗಳ ನವೀಕರಣ, 13,000 ಸಿಬ್ಬಂದಿ ನೇಮಕ ಸೇರಿದಂತೆ ಹಲವಾರು ಮಹತ್ವದ ಸುಧಾರಣಾ ಕ್ರಮಗಳನ್ನು ಕೆ.ಎಸ್.ಆರ್.ಟಿ ಮಾಡಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸೇವೆ, ಗುಣಮಟ್ಟದ ಸೌಲಭ್ಯಗಳನ್ನು ನೀಡುವುದಾಗಿ ಕೆ.ಎಸ್.ಆರ್.ಟಿ.ಸಿ ತಿಳಿಸಿದೆ.ಕೆ.ಎಸ್.ಆರ್.ಟಿ.ಸಿಯಲ್ಲಿ ಹಲವಾರು ಸುಧಾರಣೆ ಕ್ರಮಗಳನ್ನು ಕೈಗೊಂಡ ಪರಿಣಾಮ 2023ರ ಫೆಬ್ರವರಿಯಲ್ಲಿ ರಾಷ್ಟ್ರಮಟ್ಟದ ಪಿಎಸ್ ಯು ಪ್ರಶಸ್ತಿ ಕೂಡ ಸಂಸ್ಥೆಗೆ ಸಿಕ್ಕಿತ್ತು.
ಶಕ್ತಿ ಯೋಜನೆ ಜಾರಿ ಬಳಿಕ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳ, ಹಳೇ ಬಸ್ ಗಳಿಗೆ ಹೊಸ ರೂಪ, ಪರಿಸರ ಸ್ನೇಹಿ ಬಸ್ ಗಳಿಗೂ ಒತ್ತು, ಬೆಂಗಳೂರು-ಮೈಸೂರು ರಸ್ತೆಯಲ್ಲಿ ಎಲೆಕ್ಟ್ರಾನಿಕ್ ಬಸ್ ಗಳ ಸಂಚಾರ ಸೇರಿದಂತೆ ಕೆ.ಎಸ್.ಆರ್.ಟಿ.ಸಿಯಲ್ಲಿ ಹಲವಾರು ಅಭಿವೃದ್ದಿ ಕಾರ್ಯಗಳು ನಡೆಯುತ್ತಿರುವುದು ಗಮನಾರ್ಹವಾಗಿದೆ.