ದಾವಣಗೆರೆ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ 2 ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದ್ದು, ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನು ಕಳೆದುಕೊಂಡಂತೆ. ಅವರ ಕುಟುಂಬದವರಿಗೆ ನಾನು 2 ಲಕ್ಷ ರೂಪಾಯಿ ನೀಡುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.
ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ 28 ವರ್ಷದ ಭಜರಂಗದಳ ಕಾರ್ಯಕರ್ತ ಹರ್ಷ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.