alex Certify ಹತ್ಯೆಗೀಡಾದ ಬಜರಂಗದಳ ಹರ್ಷ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ಯೆಗೀಡಾದ ಬಜರಂಗದಳ ಹರ್ಷ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ

ದಾವಣಗೆರೆ: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ 2 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದ್ದು, ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನು ಕಳೆದುಕೊಂಡಂತೆ. ಅವರ ಕುಟುಂಬದವರಿಗೆ ನಾನು 2 ಲಕ್ಷ ರೂಪಾಯಿ ನೀಡುತ್ತಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದರು.

ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ 28 ವರ್ಷದ ಭಜರಂಗದಳ ಕಾರ್ಯಕರ್ತ ಹರ್ಷ ನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ 12 ಮಂದಿಯನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...