ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರ್ಪ ಸಂಸ್ಕಾರ ಸೇವಾದರ ಒಂದು ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸರ್ಪ ದೋಷ ನಿವಾರಣೆಯ ನಂಬಿಕೆಯಿಂದ ಸರ್ಪ ಸಂಸ್ಕಾರ ನಡೆಸಲಾಗುತ್ತದೆ. ಈ ಹಿಂದೆ 3200 ರೂ. ಇದ್ದ ದರವನ್ನು 4,200 ರೂ.ಗೆ ಹೆಚ್ಚಳ ಮಾಡಲಾಗಿದೆ.