ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.
ಭಾರತೀಯ ಸೇನೆಯಿಂದ ಕುಲ್ಗಾಂನಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಕುಲ್ಗಾಂ ಬಳಿ ಬಿಹಾರ ಮೂಲದ ವಲಸೆ ಕಾರ್ಮಿಕರನ್ನು ಕೊಂದಿದ್ದ ಉಗ್ರರು ಅವಿತಿರುವ ಮಾಹಿತಿ ಪಡೆದ ಸೇನೆಯಿಂದ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸದೆಬಡಿಯಲಾಗಿದೆ.