
ದಾವಣಗೆರೆ: ಮಾಜಿ ಸಚಿವ ಕುಮಾರ್ ಬಂಗಾರಪ್ಪ ವಿರುದ್ಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು ಹೇಳ್ತಿಯಲ್ಲ, ನೀನೇನು ರಾಷ್ಟ್ರೀಯ ಅಧ್ಯಕ್ಷನಾ? ನಿನಗೆ ರಾಜಕೀಯ ಮರುಜನ್ಮ ಕೊಟ್ಟಿದ್ದೆ ಬಿ.ಎಸ್. ಯಡಿಯೂರಪ್ಪ. ನಿನಗೆ ಪಕ್ಷದ ಸಿದ್ಧಾಂತ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಶಿವಮೊಗ್ಗ ಜಿಲ್ಲಾ ಬಿಜೆಪಿ ಸಂಘಟನೆ ಜೊತೆ ನೀನು ಇಲ್ಲ. ಕುಟುಂಬ ರಾಜಕಾರಣ ಬಗ್ಗೆ ಮಾತನಾಡುವ ನೀವೇನು ಸಾಚಾಗಳಾ? ಭಿನ್ನಮತಿಯ ನಾಯಕರು ಹರಿಶ್ಚಂದ್ರನ ಮಕ್ಕಳಾ ಸಾಚಾಗಳ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಜೊತೆಗೆ ಒಪ್ಪಂದ ಮಾಡಿಕೊಂಡು ನಮಗೆ ಪಾಠ ಮಾಡುತ್ತೀರಾ ಎಂದು ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ಯಡಿಯೂರಪ್ಪ ಹುಟ್ಟುಹಬ್ಬದ ಆಚರಣೆ ಬೇಡವೆಂದು ಅಧ್ಯಕ್ಷರು ಹೇಳಿದ್ದರಿಂದ ನಾವು ಸಭೆ ಆಯೋಜನೆ ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಎಲ್ಲರೂ ಸೇರಿಕೊಂಡು ಸಮಾವೇಶ ಮಾಡುತ್ತೇವೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಬಿಜೆಪಿ ಅಧ್ಯಕ್ಷರಾಗಿ ವಿಜಯೇಂದ್ರ ಮುಂದುವರೆಯುವುದು ಅಷ್ಟೇ ಸತ್ಯ. ವಿಜಯೇಂದ್ರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಎದುರಿಸುತ್ತೇವೆ. ಅವರ ನೇತೃತ್ವದಲ್ಲಿಯೇ ಮುಂದಿನ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.