ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ಉಕ್ಕಿ ಹರಿಯುತ್ತಿದ್ದು, ಅಪಾಯ ಮಟ್ಟಕ್ಕೇರಿರುವುದರಿಂದ ಸ್ನಾನಘಟ್ಟ ಮುಳುಗಡೆಯಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ನದಿಗಳಲ್ಲಿ ನೀರಿನ ಹರಿವು ಹೆಚ್ಚಳವಾಗಿ ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಕುಮಾರಧಾರಾ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಅನ್ಲಾಕ್ ನಂತರದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ನದಿ ನೀರಿನ ಏರಿಕೆಯಿಂದ ಸ್ನಾನಘಟ್ಟ ಮುಳುಗಡೆಯಾಗಿರುವುದರಿಂದ ತೀರ್ಥ ಸ್ನಾನ ಮಾಡುವವರಿಗೆ ನದಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.