alex Certify ತಕ್ಷಣ ಅಧಿವೇಶನ ಕರೆಯುವಂತೆ ಹೆಚ್.ಡಿ.ಕೆ. ಮನವಿ; ಸಿಎಂ, ಸ್ಪೀಕರ್, ರಾಜ್ಯಪಾಲರಿಗೆ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಕ್ಷಣ ಅಧಿವೇಶನ ಕರೆಯುವಂತೆ ಹೆಚ್.ಡಿ.ಕೆ. ಮನವಿ; ಸಿಎಂ, ಸ್ಪೀಕರ್, ರಾಜ್ಯಪಾಲರಿಗೆ ಪತ್ರ

ಬೆಂಗಳೂರು: ವಿಧಾನಸಭೆ ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸಿಎಂ ಬಿಎಸ್ ವೈ, ಸ್ಪೀಕರ್ ಕಾಗೇರಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿನ ಕೋವಿಡ್‌ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಪ್ರಮುಖವಾಗಿ ಕನ್ನಡ, ಕನ್ನಡಿಗ, ಕರ್ನಾಟಕದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.

ನೀರಾವರಿ ಯೋಜನೆಯ ಟೆಂಡರ್ ನಲ್ಲಿ 20,000 ಕೋಟಿ ಭ್ರಷ್ಟಾಚಾರ ನಡೆದ ಆರೋಪವಿದೆ. ನಿರಾವರಿ ಯೋಜನೆಯಲ್ಲಿ ಸಿಎಂ ಕುಟುಂಬಸ್ಥರೇ ಕಿಕ್ ಬ್ಯಾಕ್ ಪಡೆದ ಬಗ್ಗೆ ಸ್ವಪಕ್ಷದ ಹಿರಿಯ ನಾಯಕರೇ ಆರೋಪ ಮಾಡಿದ್ದರೂ ತನಿಖೆಗೆ ಸರ್ಕಾರ ಮುಂದಾಗಿಲ್ಲ. ಅಬಕಾರಿ ಇಲಾಖೆಯಲ್ಲಿಯೂ ಲಂಚ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆಯೂ ತನಿಖೆ ಸಮರ್ಪಕವಾಗಿ ನಡೆದಿಲ್ಲ. ಕೊರೊನಾ ಎರಡನೆ ಅಲೆ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ನೀಡಲಾದ ಪರಿಹಾರ ಸಮರ್ಪಕವಾಗಿಲ್ಲ. ಇನ್ನೊಂದೆಡೆ ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿದ್ದು, ಈ ಬಗ್ಗೆ ಸಿದ್ಧತೆ ನಡೆಸಿರುವ ರೀತಿಯ ಬಗ್ಗೆಯೂ ಚರ್ಚೆಯಾಗಬೇಕಿದೆ. ಈ ನಿಟ್ಟಿನಲ್ಲಿ ವಿಶೇಷ ಅಧಿವೇಶನ ಕರೆಯುವ ಅಗತ್ಯವಿದೆ ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...