ಬೆಂಗಳೂರು : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ . ಸಿ.ಎನ್ ಮಂಜುನಾಥ್ ಕಾಂಗ್ರೆಸ್ ಶಾಸಕರ ಹೇಳಿಕೆಗೆ ತಿರುಗೇಟು ನೀಡಿದರು. ಚುನಾವಣೆ ಬಂದಾಗ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂಬ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆಗೆ ತಿರುಗೇಟು ನೀಡಿದರು.
ಕುಮಾರಸ್ವಾಮಿ ಅವರು ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ತಿಳಿದುಕೊಳ್ಳಲು 13 ವರ್ಷ ಓದಬೇಕು. ಕುಮಾರಸ್ವಾಮಿ ಅವರಿಗೆ ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಮಾಡಲಾಗಿದೆ. ಆಧುನಿಕ ತಂತ್ರಜ್ಞಾನದಲ್ಲಿ ಆಪರೇಷನ್ ಮಾಡಲಾಗಿದೆ ಎಂದರು. ಮಾಹಿತಿ ಇಲ್ಲದೇ ಯಾವುದರ ಬಗ್ಗೆಯೂ ಮಾತನಾಡಬಾರದು. ಜ್ಞಾನಿಗಳು ಜ್ಞಾನಿಗಳಾಗೆಯೇ ಇರಬೇಕು, ಇನ್ನೊಂದು ಆಗಬಾರದು ಎಂದು ತಿರುಗೇಟು ನೀಡಿದ್ದಾರೆ.