ಮಂಡ್ಯ : ರೈತರಿಗೆ ಮಿಡಿಯುವ ಹೃದಯ ಕುಮಾರಸ್ವಾಮಿಯವರದ್ದುಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಮಂಡ್ಯದ ಜನರ ಋಣ ತೀರಿಸುವ ಕೆಲಸ ಮಾಡುತ್ತೇವೆ. ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ಕೊಡುವುದಿಲ್ಲ. ಕಾವೇರಿ ಸಮಸ್ಯೆಯನ್ನು ಕುಮಾರಸ್ವಾಮಿ ಬಗೆಹರಿಸಲಿದ್ದಾರೆ ಎಂದರು.
ನರೇಂದ್ರ ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಲಿಕ್ಕೆ ದೇವೇಗೌಡರು ಕೈ ಜೋಡಿಸಿದ್ದಾರೆ, ಮಂಡ್ಯದ ಜನರ ರುಣ ತೀರಿಸುವ ಕೆಲಸವನ್ನು ಕುಮಾರಸ್ವಾಮಿ ಮಾಡಲಿದ್ದಾರೆ ಎಂದರು.
ಇನ್ನೂ, ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಿದರು.ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ , ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮೊದಲಾದವರಿದ್ದರು.ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.