alex Certify ಗಮನಿಸಿ: 7 ತಿಂಗಳು ಬಂದ್ ಆಗಲಿದೆ ಈ ರಾಷ್ಟ್ರೀಯ ಹೆದ್ದಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: 7 ತಿಂಗಳು ಬಂದ್ ಆಗಲಿದೆ ಈ ರಾಷ್ಟ್ರೀಯ ಹೆದ್ದಾರಿ

ಶಿರಸಿ: ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿ 7 ತಿಂಗಳು ಬಂದ್ ಆಗಲಿದೆ. ಹೆದ್ದಾರಿಯಲ್ಲಿ ಸೇತುವೆ, ದೇವಿಮನೆ ಘಟ್ಟದಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ನವೆಂಬರ್ 1ರಿಂದ 2024 ರ ಮೇ 31 ರವರೆಗೆ 7 ತಿಂಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು.

ಸಹಾಯಕ ಆಯುಕ್ತ ದೇವರಾಜ್ ಆರ್. ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಹಾಯಕ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸಿದ ಅವರು, ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಮೂರು ಸೇತುವೆ, ದೇವಿಮನೆ ಘಟ್ಟದಲ್ಲಿ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳುವುದರಿಂದ ಸಂಚಾರ ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ.

2020ರಲ್ಲಿ ಗುತ್ತಿಗೆ ಪಡೆದ ಕಂಪನಿ ಶಿರಸಿ -ಕುಮಟಾ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿತ್ತು. ನವೆಂಬರ್ 1ರಿಂದ 7 ತಿಂಗಳ ಕಾಲ ಕುಮಟಾ -ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...