ಬೆಂಗಳೂರು : ಅ. 19ರ ಇಂದು ಮುಜರಾಯಿ ದೇವಾಲಯಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಆಯುಕ್ತರ ಕಾರ್ಯಾಲಯ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸುತ್ತೋಲೆ ಹೊರಡಿಸಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಎಲ್ಲಾ ಉಪ ವಿಭಾಗಗಳ ಉಪವಿಭಾಗಾಧಿಕಾರಿಗಳು, ಎಲ್ಲಾ ತಾಲ್ಲೂಕುಗಳ ಕಂದಾಯ ತಹಸೀಲ್ದಾರ್ಗಳು, ಸಂಬಂಧಿಸಿದ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು/ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು/ ಆಡಳಿತಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ.
ನವರಾತಿ ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿರುತ್ತದೆ, ಅದರಂತೆ ದಿನಾಂಕ:19:10,2023ರ ಗುರುವಾರ ಲಲಿತಾ ಪಂಚಮಿ ವಿಶೇಷ ದಿನವಾಗಿರುತ್ತದೆ. ಆದರಿಂದ ಈ ವಿಶೇಷ ದಿನದಂದು ಉತ್ತಮ ರೀತಿಯಲ್ಲಿ ಮಳೆಯಾಗಿ, ನಮ್ಮದುವಾಗಿ ಬೆಳೆಗಳು ಬರಲೆಂದು ಹಾಗೂ ಸಸ್ಯರಾಶಿಗಳು ಸಮ್ಮಪ್ರಿಯಾಗಿ ಸಕಲರಿಗೂ ಒಳಿತಾಗಲಿ ಎಂದು ಸಂಕಲ್ಪಿಸಿ ಪ್ರಾರ್ಥಿಸುವ ಮೂಲಕ, ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ದೇವಸ್ತಾನಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರಮಾಡಿಕೊಂಡು ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಕುಂಕುಮಾರ್ಚನೆಯನ್ನು, ಅರ್ಚಕರ ಮೂಲಕ ಎರಡು ಪಾಳೆಯಲ್ಲಿ ನೆರವೇರಿಸುವುವಂತೆ ಆದೇಶಿಸಲಾಗಿದೆ.
19.10.2023 ರಂದು ಸಾಮೂಹಿಕ ಕುಲಕುಮಾರ್ಚನೆಯನ್ನು ನಡೆಸಲು ಕಾರಣಾಂತರಗಳಿಂದ ಸಾಧ್ಯವಾಗದಿದ್ದಲ್ಲಿ ದಿನಾಂಕ: 22: 10 : 2023ರ ಭಾನುವಾರ ದುರ್ಗಾಮಿಯಂದು ಈ ಕಾರ್ಯಕ್ರಮವನ್ನು ನಡೆಸುವುದು, ಈ ಸಂಬಂಧ ಭಕ್ತಾಧಿಗಳ, ಸಾರ್ವಜನಿಕರ ಮಾಹಿತಿಗಾಗಿ ದೇವಸ್ಥಾನಗಳ ಸೂಚನಾ ಫಲಕಗಳಲ್ಲಿ ಸ್ಥಳೀಯ ಮಾಧ್ಯಮಗಳಲ್ಲಿ ಪ್ರಚುರಪಡಿಸುವುದು ಹಾಗೂ ಸ್ಥಳೀಯ ಜನ ಪ್ರತಿನಿಧಿಗಳಿಗೆ ಈ ವಿಶೇಷ ಕಾರ್ಯಕ್ರಮದ ಕುರಿತು ಮಾಹಿತಿ ನೀಡುವಂತೆ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.