ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಸಚಿವ ಬೈರತಿ ಬಸವರಾಜ್ ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಮನವಿ ಮಾಡಿದ್ದಾರೆ.
ವಿಧಾನಸೌಧದ ಸಿಎಂ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ ಅವರು, ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ 400 ಕೋಟಿ ರೂಪಾಯಿ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇತ್ತೀಚೆಗಷ್ಟೇ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ರಚಿಸಿದ ಸರ್ಕಾರ ಅಧ್ಯಕ್ಷರು, ಸದಸ್ಯರನ್ನು ನೇಮಿಸಿದೆ. ಇದರ ಬೆನ್ನಲ್ಲೇ ವಿವಿಧ ಜಾತಿ, ಸಮುದಾಯಗಳಿಂದ ನಿಗಮ ರಚನೆಗೆ ಬೇಡಿಕೆ ಬಂದಿದೆ. ಈಗ ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಬೈರತಿ ಬಸವರಾಜ್ ಸಿಎಂಗೆ ಮನವಿ ಮಾಡಿದ್ದಾರೆನ್ನಲಾಗಿದೆ.