alex Certify BIG BREAKING: ಸಿಎಂಗೆ ಹೊಸ ಬೇಡಿಕೆ ಇಟ್ಟ ಸಚಿವ ಬೈರತಿ ಬಸವರಾಜ್, ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಸಿಎಂಗೆ ಹೊಸ ಬೇಡಿಕೆ ಇಟ್ಟ ಸಚಿವ ಬೈರತಿ ಬಸವರಾಜ್, ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಸಚಿವ ಬೈರತಿ ಬಸವರಾಜ್ ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಮನವಿ ಮಾಡಿದ್ದಾರೆ.

ವಿಧಾನಸೌಧದ ಸಿಎಂ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ ಅವರು, ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಿ 400 ಕೋಟಿ ರೂಪಾಯಿ ನೀಡಬೇಕೆಂದು ಮನವಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ರಚಿಸಿದ ಸರ್ಕಾರ ಅಧ್ಯಕ್ಷರು, ಸದಸ್ಯರನ್ನು ನೇಮಿಸಿದೆ. ಇದರ ಬೆನ್ನಲ್ಲೇ ವಿವಿಧ ಜಾತಿ, ಸಮುದಾಯಗಳಿಂದ ನಿಗಮ ರಚನೆಗೆ ಬೇಡಿಕೆ ಬಂದಿದೆ. ಈಗ ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಚಿವ ಬೈರತಿ ಬಸವರಾಜ್ ಸಿಎಂಗೆ ಮನವಿ ಮಾಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...