alex Certify ಕುರುಬರ ST ಮೀಸಲಾತಿ ಸಮಾವೇಶಕ್ಕೆ ಹರಿದು ಬಂದ ಜನಸಾಗರ, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟ್ರಾಫಿಕ್ ಜಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುರುಬರ ST ಮೀಸಲಾತಿ ಸಮಾವೇಶಕ್ಕೆ ಹರಿದು ಬಂದ ಜನಸಾಗರ, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು: ಕುರುಬರಿಗೆ ಎಸ್.ಟಿ. ಮೀಸಲಾತಿ ನೀಡುವಂತೆ ಒತ್ತಾಯಿಸಿ ಬೆಂಗಳೂರಿನ ಮಾದಾವರ ಬಳಿ ಆಯೋಜಿಸಿರುವ ಸಮಾವೇಶಕ್ಕೆ ಜನಸಾಗರವೇ ಹರಿದುಬಂದಿದೆ.

ಮಾದಾವರ ಸಮೀಪದ ಬಿಐಇಸಿಯಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯದ ವಿವಿಧ ಕಡೆಯಿಂದ ಲಕ್ಷಾಂತರ ಜನ ಆಗಮಿಸಿದ್ದಾರೆ. ಸಾವಿರಾರು ವಾಹನಗಳಲ್ಲಿ ಜನ ಆಗಮಿಸಿದ್ದು, ಸಂಚಾರ ದಟ್ಟಣೆ ಉಂಟಾಗಿದೆ. ತುಮಕೂರು ರೋಡ್ ಫುಲ್ ಜಾಮ್ ಆಗಿದ್ದು, ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಕಾಗಿನೆಲೆ ನಿರಂಜನಾನಂದಪುರಿ ಶ್ರೀಗಳ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ. ಸಮುದಾಯದ ರಾಜಕಾರಣಿಗಳು, ಮಠಾಧೀಶರು ಸೇರಿದಂತೆ ಸಮಾವೇಶದಲ್ಲಿ 10 ಲಕ್ಷ ಜನರು ಭಾಗಿಯಾಗುವ ಸಾಧ್ಯತೆ ಇದೆ. ಜನವರಿ 15 ರಂದು ಕಾಗಿನೆಲೆಯಲ್ಲಿ ಶ್ರೀಗಳು ಪಾದಯಾತ್ರೆ ಆರಂಭಿಸಿದ್ದರು. ಫೆಬ್ರವರಿ 4 ರಂದು ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಪಾದಯಾತ್ರೆ ಅಂತ್ಯವಾಗಿತ್ತು. ಕುರುಬ ಸಮುದಾಯವನ್ನು ಮೀಸಲಾತಿಗೆ ಸೇರಿಸಬೇಕೆಂದು ಪಾದಯಾತ್ರೆ ನಡೆಸಿದ ನಂತರ ಇಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...