
ನವದೆಹಲಿ: ಪಂಜಾಬ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ರಾಜ್ಯದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಪಂಜಾಬ್ ನಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.
ದೆಹಲಿಯ ಕನೋಲ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಪಂಜಾಬ್ ನ ಪಟಿಯಾಲ ಬಳಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಕುರುಬೂರು ಶಾಂತಕುಮಾರ್ ಹಾಗೂ ತಮಿಳುನಾಡಿನ ರೈತ ಮುಖಂಡ ಪಾಂಡಿಯನ್ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳು ಪಟಿಯಾಲ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಬೆಂಗಳೂರು ಆಸ್ಪತ್ರೆಗೆ ಏರ್ ಲಿಫ್ಟ್ ಮಾಡುವ ನಿಟ್ಟಿನಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಸಿದ್ಧತೆ ನಡೆಸಿದ್ದಾರೆ.
ಈ ನಿಟ್ಟಿನಲ್ಲಿ ಈಗಗಾಲೇ ಪಟಿಯಾಲ ಜಿಲ್ಲಾಧಿಕಾರಿಗಳ ಜೊತೆ ವಿ.ಸೋಮಣ್ಣ ಮಾತುಕತೆ ನಡೆಸಿದ್ದು, ಬೆಂಗಳುರು ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರಿಗೆ ಅಪಘಾತದಲ್ಲಿ ಬೆನ್ನು ಮೂಳೆಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.