ನವದೆಹಲಿ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಂಜಾಬ್ ನ ಪಟಿಯಾಲ ಬಳಿ ನಡೆದಿದೆ.
ದೆಹಲಿಹಲಿಯ ಕನೋಲಿ ಬಾರ್ಡರ್ ನಲ್ಲಿ ಕಳೆದ ಒಂದು ವರ್ಷದಿಂದ ರೈತ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಮಹತ್ವದ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತೆರಳುತ್ತಿದ್ದರು.
ಕುರುಬೂರು ಶಾಂತಕುಮಾರ್ ಪ್ರಯಾಣಿಸುತ್ತಿದ್ದ ಕಾರು ಪಂಜಾಬ್ ನ ಪಟಿಯಾಲ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕುರುಬೂರು ಶಾಂತಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಜೊತೆ ಕಾರಿನಲ್ಲಿದ್ದ ತಮಿಳುನಾಡಿನ ರೈತ ಮುಖಂಡ ಪಾಂಡಿಯನ್ ಎಂಬುವವರಿಗೂ ಗಾಯಗಳಾಗಿವೆ. ಸ್ಥಳೀಯರ ಸಾಹಾಯದಿಂದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.