alex Certify ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೋನಾ; ಒಂದು ವಾರ ರಜೆ ನೀಡಿದ ಕುವೆಂಪು ವಿವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳು, ಸಿಬ್ಬಂದಿಗೆ ಕೊರೋನಾ; ಒಂದು ವಾರ ರಜೆ ನೀಡಿದ ಕುವೆಂಪು ವಿವಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ಒಂದು ವಾರ ರಜೆ ನೀಡಲಾಗಿದೆ. ಗ್ರಂಥಾಲಯದ 5 ಜನ ಸಿಬ್ಬಂದಿ ಮತ್ತು ವಿವಿಯ 19 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಜನವರಿ 17 ರಿಂದ 21 ರವರೆಗೆ ಕುವೆಂಪು ವಿವಿಗೆ ರಜೆ ಘೋಷಿಸಲಾಗಿದೆ.

ಸೋಂಕಿತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ 5 ದಿನ ರಜೆ ನೀಡಲಾಗಿದೆ. ಈ ಅವಧಿಯಲ್ಲಿ ಆನ್ಲೈನ್ ತರಗತಿಗಳು ನಡೆಯಲಿವೆ. ಕೊರೋನಾ ಸೋಂಕಿತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಕೋವಿಡ್ ಪರೀಕ್ಷೆ ಮಾಡಿಸಲು ಕ್ರಮಕೈಗೊಳ್ಳಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...