alex Certify ನಿಷೇಧಾಜ್ಞೆ ಹಿನ್ನೆಲೆ: ಇಂದು ಶಾಲೆ, ಕಾಲೇಜುಗಳಿಗೆ ರಜೆ; ಪರೀಕ್ಷೆ ಮುಂದೂಡಿದ ಕುವೆಂಪು ವಿವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಷೇಧಾಜ್ಞೆ ಹಿನ್ನೆಲೆ: ಇಂದು ಶಾಲೆ, ಕಾಲೇಜುಗಳಿಗೆ ರಜೆ; ಪರೀಕ್ಷೆ ಮುಂದೂಡಿದ ಕುವೆಂಪು ವಿವಿ

ಶಿವಮೊಗ್ಗ: ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ನಾಳೆ ನಡೆಯಬೇಕಾಗಿದ್ದ ಎಂಎಸ್ಸಿ(ಹಾನರ್ಸ್) ಮತ್ತು ಪಿ.ಹೆಚ್.ಡಿ. ಕೋರ್ಸ್ ವರ್ಕ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.‌ಕೆ. ನವೀನ್ ಕುಮಾರ್ ತಿಳಿಸಿದ್ದಾರೆ.

ನಿಷೇಧಾಜ್ಞೆ ಹಿನ್ನೆಲೆ‌ ಕುವೆಂಪು ವಿವಿ ವಿದ್ಯಾರ್ಥಿಗಳಿಗೆ ರಜೆ

ಸೆಕ್ಷನ್ 144 ಜಾರಿಗೊಳಿಸಿರುವುದರಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರ ಪ್ರದೇಶದ ಶಾಲೆ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಆಗಸ್ಟ್ 16ರಂದು ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕೂಡ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ರಜೆ ಘೋಷಿಸಿದ್ದಾರೆ.

ವಿಶ್ವವಿದ್ಯಾಲಯಕ್ಕೆ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳಿಂದ ಪ್ರತಿ ದಿನ ಪ್ರಯಾಣಿಸುವ ವಿದ್ಯಾರ್ಥಿಗಳಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ. 16 ರಂದು ರಜೆ ಘೋಷಿಸಲಾಗಿದ್ದು, ಉಪನ್ಯಾಸಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಎಂದಿನಂತೆ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...