ಸುಳ್ಯ : ಸುಳ್ಯದ ಕೆವಿಜಿ ಪ್ರಾಂಶುಪಾಲ ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರೇಣುಕಾ ಪ್ರಸಾದ್, ಮನೋಜ್ ರೈ , ನಾಗೇಶ್, ವಾಮನ್ ಪೂಜಾರಿ, ಶಂಕರ ಸೇರಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಶರಣ್ ಪೂಜಾರಿ ತಲೆ ಮರೆಸಿಕೊಂಡಿರುವ ಹಿನ್ನೆಲೆ ಹೈಕೋರ್ಟ್ ನಂತರ ಶಿಕ್ಷೆ ಪ್ರಕಟಿಸಲಿದೆ. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಅವರಿದ್ದ ಪೀಠ ಆದೇಶ ಹೊರಡಿಸಿದೆ.
ಕೆವಿಜಿ ಮೆಡಿಕಲ್ ಕಾಲೇಜು ಆಡಳಿತ ಅಧಿಕಾರಿಯಾಗಿದ್ದ ಪ್ರೊ ಎ ಎಸ್ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪು ರದ್ದುಗೊಳಿಸಿದ್ದ ಹೈಕೋರ್ಟ್ ದೋಷಿಗಳೆಂದು ತೀರ್ಪು ನೀಡಿತ್ತು. ಇದೀಗ ಐದು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.2011ರ ಏಪ್ರಿಲ್ 28 ರಂದು ಬೆಳಗ್ಗೆ ಅಂಬೆತಡ್ಕ ಬಳಿ ಶ್ರೀ ಕೃಷ್ಣ ಆಯುರ್ವೇದಿಕ್ ಥೆರಪಿ ರಸ್ತೆಯಲ್ಲಿ ವಾಕಿಂಗ್ ಮಾಡುತ್ತಿದ್ದ ರಾಮಕೃಷ್ಣ ಅವರ ಮೇಲೆ ಆರೋಪಿಗಳು ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ್ದರು. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು .