
ಬೆಂಗಳೂರು: ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ. ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಬಾವುಟ ನೀಡಿ, ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಎಲ್.ಆರ್.ಶಿವರಾಮೇಗೌಡ ಅವರ ಪುತ್ರ ಚೇತನ್ ಗೌಡ ಕೂಡ ಇದೇ ವೇಳೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.