ಬೆಂಗಳೂರು: ಕಾರ್ಮಿಕ ಕಾನೂನು ವ್ಯಾಪ್ತಿಗೆ ಐಟಿ, ಬಿಟಿ ಕಂಪನಿಗಳನ್ನು ತರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಕಂಪನಿಗಳೊಂದಿಗೆ ಚರ್ಚೆ ನಡೆಸುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 7,500ಕ್ಕೂ ಹೆಚ್ಚು ಐಟಿ, ಬಿಟಿ ಕಂಪನಿಗಳು ಇದ್ದು, ಲಕ್ಷಾಂತರ ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ನೌಕರರಿಗೆ ಹಲವು ಸಮಸ್ಯೆಗಳಿರುತ್ತವೆ. ಕೆಲಸದಿಂದ ತೆಗೆದು ಹಾಕುವುದು, ಲೈಂಗಿಕ ಕಿರುಕುಳ, ಮಾನಸಿಕ ಒತ್ತಡ, ಕೇವಲ ರಾತ್ರಿ ಪಾಳಿ ಕೆಲಸಕ್ಕೆ ಹಾಕುವುದು ಸೇರಿ ಹಲವು ಸಮಸ್ಯೆಗಳ ಬಗ್ಗೆ ದೂರು ಬಂದಿವೆ. ಆದರೆ, ಕಾರ್ಮಿಕ ಕಾನೂನುಗಳಿಂದ ಐಟಿ-ಬಿಟಿ ಕಂಪನಿಗಳು ಹೊರಗಿರುವುದರಿಂದ ಕ್ರಮ ಕೈಗೊಳ್ಳಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.
ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಬರುವುದಿಲ್ಲ. ಹೀಗಾಗಿ ಐಟಿ, ಬಿಟಿ ಕಂಪನಿಗಳನ್ನು ಕಾರ್ಮಿಕ ಕಾನೂನು ವ್ಯಾಪ್ತಿಗೆ ತರಲು ಬಗ್ಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.