ಕಲಬುರಗಿ: ನರೇಗಾ ಕಾಮಗಾರಿ ವೇಳೆ ಹೃದಯಾಘಾತದಿಂದ ಕಾರ್ಮಿಕ ಮೃತಪಟ್ಟ ಘಟನೆ ಆಳಂದಾ ತಾಲೂಕಿನ ದಣ್ಣೂರು ಗ್ರಾಮದಲ್ಲಿ ನಡೆದಿದೆ.
ನರೇಗಾ ಯೋಜನೆಯ ಉದ್ಯೋಗ ಖಾತ್ರಿ ಕೆಲಸದಲ್ಲಿ ನಿರತರಾಗಿದ್ದ ಶರಣಪ್ಪ(44) ಮೃತಪಟ್ಟವರು. ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಗಾಗಿ ಕಾರ್ಮಿಕರೊಂದಿಗೆ ತೆರಳಿದ್ದ ಶರಣಪ್ಪ ಅವರಿಗೆ ಕೆಲಸದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕಡಗಂಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಘಟನೆಯ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಬಿ.ಆರ್. ಪಾಟೀಲ್ ಮೃತನ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.