
ಕಲಬುರಗಿ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಕಲಬುರಗಿಯ ಲಾಡ್ಲೆ ಮಶಾಕ್ ದರ್ಗಾ ರಾಘವಚೈತನ್ಯ ಶಿವಲಿಂಗ ಪೂಜೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್ ಅನುಮತಿ ನೀಡಿದೆ.
ಶಿವರಾತ್ರಿ ಹಿನ್ನೆಲೆಯಲ್ಲಿ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅನುಮತಿ ನೀಡಿವಂತೆ ಹಿಂದೂ ಸಂಘಟನೆಗಳು ಕೋರ್ಟ್ ಮೆಟ್ಟಿಮೇಲೆರಿದ್ದವು. ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ನ್ಯಾಯಾಲಯ, ನಾಳೆ ಮಧ್ಯಾಹ್ನ 2ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.
ಆದರೆ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಹೊರತುಪಡಿಸಿ ಬೇರೆಯವರಿಗೆ ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಅವಕಾಶ ನೀಡಲಾಗಿದೆ. ಅರ್ಜಿದಾರ ಸಿದ್ರಾಮಯ್ಯ ಹಿರೇಮಠ ಸೇರಿದಂತೆ 15 ಜನರಿಗೆ ಅವಕಾಶ ನೀಡಲಾಗಿದೆ. 15 ಜನರು ಆಧಾರ್ ಕಾರ್ಡ್ ನೀಡಬೇಕು. ಜಿಲ್ಲಾಡಳಿತಕ್ಕೆ 15 ಜನರ ಪಟ್ಟಿ ನೀಡುವಂತೆ ಸೂಚಿಸಿದೆ.