ಬಳ್ಳಾರಿ: ಬಳ್ಳಾರಿ ವಿಮ್ಸ್ ನಲ್ಲಿ ಮಹಿಳಾ ಕಂಪ್ಯೂಟರ್ ಆಪರೇಟರ್ ಮೇಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕೇಳಿಬಂದಿದೆ.
ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧೀಕ್ಷಕ ವಿ.ಕೆ.ವೆಂಕಟೇಶ್ ವಿರುದ್ಧ, ಮಹಿಳಾ ಕಂಪ್ಯೂಟರ್ ಆಪರೇಟರ್ ಗಂಭೀರ ಆರೋಪ ಮಾಡಿದ್ದು, ವಿ.ಕೆ.ವೆಂಕಟೇಶ್ ಪದೇ ಪದೇ ನನ್ನನ್ನು ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಸಂತ್ರಸ್ತ ಮಹಿಳೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲೈಂಗಿಕ ಕ್ರಿಯೆಗೆ ಸಹಕರಿಸದಿದ್ದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆಯೊಡ್ಡಿದ್ದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆ ದೂರಿನ ಮೇರೆಗೆ ವಿ.ಕೆ.ವೆಂಕಟೇಶ್ ವಿರುದ್ಧ ಎಫ್ಐಆರ್ ದಾಖಲಾಗಿದೆ.