
ಶಾಮಿಲಿ ಏಳು ತಿಂಗಳ ಗರ್ಭಿಣಿಯಾಗಿದ್ದರಿಂದ ಕೊರೊನಾ ಲಸಿಕೆಯನ್ನ ಪಡೆದಿರಲಿಲ್ಲ. ಏಪ್ರಿಲ್ 20ರಂದು ಕರ್ತವ್ಯದಿಂದ ರಜೆ ಪಡೆದು ಕೋಲಾರಕ್ಕೆ ತೆರಳಿದ್ದರು. ಮೇ.2ರಂದು ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜನವರಿ 12ರಂದು ಪ್ರೊಬೆಷನರಿ ಪಿಎಸ್ಐ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದ ಶ್ಯಾಮಿಲಿ ಮಂಗಳೂರಿನ ಎಸ್ಪಿ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು.