
ತುಮಕೂರು: ಕೆರೆಯಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ ಘಟನೆ ದೇವರಾಯನರೊಪ್ಪದಲ್ಲಿ ನಡೆದಿದೆ. ಶರೀಫ್(10), ಬಾನುಬಿ(13), ಚಾಂದ್(4) ಮೃತಪಟ್ಟವರು ಎಂದು ಹೇಳಲಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದೇವರಾಯನರೊಪ್ಪದ ಬಳಿ ದನ ಮೇಯಿಸಲು ತೆರಳಿದ್ದಾಗ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ದನ ಮೇಯಿಸಲು ಹೋಗಿದ್ದ ಮಕ್ಕಳು, ಕೆರೆಯಲ್ಲಿ ದನಗಳಿಗೆ ನೀರು ಕುಡಿಸಲು ಹೋಗಿ ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆನ್ನಲಾಗಿದೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.