
ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ.
13 ವರ್ಷದ ಆಕಾಶ್ ಮತ್ತು ಲೋಕೇಶ್ ಮೃತಪಟ್ಟವರು ಎಂದು ಹೇಳಲಾಗಿದೆ. ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಬಾಲಕರು ಈಜಲು ಕೆರೆಗೆ ತೆರಳಿದ್ದರು. ಒಬ್ಬ ಬಾಲಕ ಅಪಾಯದಿಂದ ಪಾರಾಗಿದ್ದಾನೆ. ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.