
ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಬಿಲ್ಲೇನಹಳ್ಳಿ ಗವಿರಂಗನಾಥ ಸ್ವಾಮಿ ದೇವಾಲಯದ ಕೆರೆಯಲ್ಲಿ ನಡೆದಿದೆ.
ಭರತ್(22), ವಿನೋದ್(21) ನೀರು ಪಾಲಾದವರು ಎಂದು ಹೇಳಲಾಗಿದೆ. ಇವರು ಮಂಡ್ಯ ಜಿಲ್ಲೆ ಹೊಳಲು ಗ್ರಾಮದ ನಿವಾಸಿಗಳಾಗಿದ್ದಾರೆ. ನಾಲ್ವರು ಸ್ನೇಹಿತರ ಜೊತೆಗೆ ದೇವಾಲಯಕ್ಕೆ ಬಂದಿದ್ದರು. ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಕೆಆರ್ ಪೇಟೆ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.