
ಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು ಕಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ.
ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮದ ನಂದ್ರೋಳ್ಳಿಯಲ್ಲಿ ಘಟನೆ ನಡೆದಿದೆ. ಕೆರೆ ನೀರಿನಲ್ಲಿ ಮುಳುಗಿ ಧನರಾಜ್(13), ಛಾಯಾ(7) ಸಾವು ಕಂಡಿದ್ದಾರೆ. ರಕ್ಷಿಸಲ್ಪಟ್ಟ ತಾಯಿ ಶೀಲಾ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.