alex Certify ಕೌಟುಂಬಿಕ ಕಲಹದಿಂದ ಅನಾಹುತ: ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರಲ್ಲಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೌಟುಂಬಿಕ ಕಲಹದಿಂದ ಅನಾಹುತ: ಆತ್ಮಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ನಾಲ್ವರಲ್ಲಿ ಮೂವರ ಸಾವು

ರಾಮನಗರ: ಒಂದೇ ಕುಟುಂಬದ ನಾಲ್ವರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಬಾಲಕಿ ಮಾತ್ರ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ದಮ್ಮನಕಟ್ಟೆಯಲ್ಲಿ ಘಟನೆ ನಡೆದಿದೆ. ಸಿದ್ದಮ್ಮ(50),  ಸುಮಿತ್ರಾ(30), ಹನುಮಂತರಾಜು(35) ಮೃತಪಟ್ಟವರು ಎಂದು ಹೇಳಲಾಗಿದೆ. ಹನುಮಂತರಾಜು ಮತ್ತು ಸುಮಿತ್ರಾ ದಂಪತಿಯ ಪುತ್ರಿ ಕೀರ್ತನಾ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಕೆರೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಟ್ಟು ಐವರು ಕೆರೆಗೆ ಹಾರಿ ಆತ್ಮಹತ್ಯೆಗೆ ಮುಂದಾಗಿದ್ದರು. ಸುಮಿತಾ ಪುತ್ರಿ ಚಂದನಾ(10) ಊರಿಗೆ ವಾಪಸಾಗಿದ್ದಾಳೆ. ಗ್ರಾಮಸ್ಥರಿಗೆ ಚಂದನಾ ವಿಷಯ ತಿಳಿಸಿದ ಹಿನ್ನಲೆಯಲ್ಲಿ ಕೀರ್ತನಾಳನ್ನು ರಕ್ಷಿಸಲಾಗಿದೆ. ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...