alex Certify ಜಾರಕಿಹೊಳಿ ಸೋದರನಿಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾರಕಿಹೊಳಿ ಸೋದರನಿಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ.

ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಹೋದರ ಲಖನ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿಲ್ಲ. ಮಹಂತೇಶ್ ಕವಟಗಿಮಠ ಅವರಿಗೆ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.

ಲಖನ್ ಜಾರಕಿಹೊಳಿಯವರಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದರು. ಆದರೆ, ಟಿಕೆಟ್ ಕೈ ತಪ್ಪಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಪರವಾಗಿ ಟಿಕೆಟ್ ಕೇಳಿದ್ದ ರಮೇಶ್ ಜಾರಕಿಹೊಳಿ ಪ್ರಚಾರವನ್ನು ಕೂಡ ಆರಂಭಿಸಿದ್ದರು.

ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿದ್ದು, ಲಖನ್ ಜಾರಕಿಹೊಳಿ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...