alex Certify ಬಿಜೆಪಿ -ಕಾಂಗ್ರೆಸ್ ಗೆ ಬಿಗ್ ಶಾಕ್: ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ರಂಗೇರಿದ ಬೆಳಗಾವಿ ಕ್ಷೇತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ -ಕಾಂಗ್ರೆಸ್ ಗೆ ಬಿಗ್ ಶಾಕ್: ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ರಂಗೇರಿದ ಬೆಳಗಾವಿ ಕ್ಷೇತ್ರ

ವಿಧಾನಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುವುದು ಖಚಿತವಾಗಿದೆ. ಇವತ್ತು ಅವರು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾದ ಇಂದು ಲಖನ್ ಜಾರಕಿಹೊಳಿ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸುವರು.

ಲಖನ್ ಗೆ ಬಿಜೆಪಿ ಟಿಕೆಟ್ ನೀಡಬೇಕೆಂದು ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ನಾಯಕರಿಗೆ ಮನವಿ ಮಾಡಿ ಪ್ರಚಾರ ಕೈಗೊಂಡಿದ್ದರು. ಲಖನ್ ಪರವಾಗಿ ರಮೇಶ್ ಮತಯಾಚಿಸಿದ್ದರು. ಆದರೆ, ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಖನ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಲಖನ್ ಪರಾಭವಗೊಂಡಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಂಬಲ ಅವರಿಗಿತ್ತು. ಉಪ ಚುನಾವಣೆ ಸೋಲಿನ ನಂತರ ಲಖನ್ ಬಿಜೆಪಿಯಲ್ಲಿ ಸಕ್ರಿಯರಾಗಿದ್ದರು. ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಪರವಾಗಿದ್ದರು.

ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಶಾಸಕರಾಗಿದ್ದಾರೆ. ಸತೀಶ್ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದಾರೆ. ಲಖನ್ ಸ್ಪರ್ಧಿಸುವುದರೊಂದಿಗೆ ಬೆಳಗಾವಿ ಚುನಾವಣೆ ಕಣ ರಂಗೇರಿದೆ. ಲಖನ್ ಜಾರಕಿಹೊಳಿ ಸ್ಪರ್ಧೆ ಮಾಡಿರುವುದರಿಂದ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪ್ರಬಲ ಪೈಪೋಟಿ ಎದುರಾಗಲಿದೆ. ಎರಡು ಸಲ ವಿಧಾನ ಪರಿಷತ್ ಸದಸ್ಯರಾಗಿರುವ ಮಹಾಂತೇಶ ಕವಟಗಿಮಠ ಮೂರನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ನಿಂದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಅಭ್ಯರ್ಥಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...