ಲಖೀಂಪುರ್ ಖೇರಿ: ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಲಕ್ನೋ ಸೇರಿದಂತೆ ವಿವಿಧೆಡೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದ ಮಾಹಿತಿ ಬಂದ ಕೂಡಲೇ ಸ್ಥಳೀಐರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಎಂದು ಲಖೀಂಪುರ್ ಖೇರಿ ಎಸ್.ಡಿ.ಎಂ. ಸಂಜಯ್ ಕುಮಾರ್ ಹೇಳಿದರು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಹೋಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.