ಕಲಬುರ್ಗಿ: ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ತೈಲದರ ಏರಿಕೆಯಾಗಿದ್ದರೂ ಕೂಡ ರಾಜ್ಯದಲ್ಲಿ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ತೈಲದರ ಹೆಚ್ಚಾದ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ, ಕೊರೋನಾ ನೈಸರ್ಗಿಕ ವಿಕೋಪ ಕಾರಣಗಳಿಂದ ಜನಸಾಮಾನ್ಯರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಯಾಣ ದರ ಹೆಚ್ಚಳ ಮಾಡುವುದರಿಂದ ಜನರಿಗೆ ತೊಂದರೆಯಾಗುತ್ತದೆ. ಹೀಗಾಗಿ, ತೈಲ ದರ ಹೆಚ್ಚಾಗಿದ್ದರೂ ಕೂಡ ಪ್ರಯಾಣದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.