
ಬೆಂಗಳೂರು: ರಾಜ್ಯದ ಹಲವೆಡೆ ಬಸ್ ಸಂಚಾರ ಆರಂಭವಾಗಿದೆ ಎಂದು ಸಾರಿಗೆ ಸಚಿವರಾದ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.
ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಬಗ್ಗೆ ಮಾಹಿತಿ ಇದೆ. ಮಾಧ್ಯಮಗಳ ಮೂಲಕ ಮಾಹಿತಿ ಗೊತ್ತಾಗಿದೆ. ನಾನು ಯಾರ ಬಗ್ಗೆಯೂ ಟೀಕೆ-ಟಿಪ್ಪಣಿ ಮಾಡುವುದಿಲ್ಲ. ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್ ಪಡೆದಿದ್ದಾರೆ ಎನ್ನುವ ಮಾಹಿತಿ ಇದ್ದು, ರಾಜ್ಯದ ಬಹುತೇಕ ಭಾಗದಲ್ಲಿ ಸಂಚಾರ ಆರಂಭವಾಗಿದೆ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು. ಸಾರಿಗೆ ಸಂಸ್ಥೆಯ ಸಿಬ್ಬಂದಿ ಮುಷ್ಕರ ವಾಪಸ್ ಪಡೆಯುವ ಬಗ್ಗೆ ನಿನ್ನೆ ತಿಳಿಸಿದ್ದರು. ನಂತರ ನಿಲುವು ಬದಲಿಸಿದರು. ಇವತ್ತು ಮುಷ್ಕರ ವಾಪಸ್ ಪಡೆಯುವುದಾಗಿ ಹೇಳಲಾಗಿದೆ. ಅವರ ಘೋಷಣೆ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದ್ದಾರೆ.
ಸಾರಿಗೆ ಸಿಬ್ಬಂದಿ ಯಾರ ಮಾತಿಗೂ ಕಿವಿಗೊಡಬೇಡಿ, ನಿಮ್ಮ ಕೆಲಸ ಆರಂಭಿಸಿ, ಚಾಲಕರು, ನಿರ್ವಾಹಕರು, ಮೆಕಾನಿಕ್ ಗಳು ನಿಮ್ಮ ಕೆಲಸ ಆರಂಭಿಸಿ. ನಿಮ್ಮೊಂದಿಗೆ ನಾವಿದ್ದೇವೆ. ಎಸ್ಮಾ ಜಾರಿ ಪ್ರಶ್ನೆಯೇ ಇಲ್ಲ. ನಮ್ಮ ಸಿಬ್ಬಂದಿ ಮೇಲೆ ನಮಗೆ ಭರವಸೆ, ವಿಶ್ವಾಸ ಇದೆ ಎಂದು ಲಕ್ಷ್ಮಣ ಸವದಿ ತಿಳಿಸಿದ್ದಾರೆ.