ಬಾಗಲಕೋಟೆ: ಚಿತ್ರರಂಗಕ್ಕೆ ಮತ್ತೊಬ್ಬ ರಾಜಕಾರಣಿ ಎಂಟ್ರಿ ಕೊಟ್ಟಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ‘ದೇಸಾಯಿ’ ಕನ್ನಡ ಸಿನಿಮಾಕ್ಕೆ ಬಣ್ಣ ಹಚ್ಚಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ -ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ‘ದೇಸಾಯಿ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಅಥಣಿ ಶಾಸಕ ಲಕ್ಷ್ಮಣ ಸವದಿ ಭಾಗವಹಿಸಿದ್ದಾರೆ. ಕುಸ್ತಿಪಟುವಿಗೆ ಸವದಿ ಅವರು ಪ್ರಶಸ್ತಿ ನೀಡಿ ಪ್ರೋತ್ಸಾಹಿಸುವ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ಲಕ್ಷ್ಮಣ ಸವದಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ.
ಒಂದು ಸಣ್ಣ ಪಾತ್ರದಲ್ಲಿ ಪೈಲ್ವಾನರಿಗೆ ಪ್ರೋತ್ಸಾಹ ನೀಡುವ ದೃಶ್ಯದಲ್ಲಿ ಕಾಣಿಸಿಕೊಂಡಿದ್ದೇನೆ. ಇದೇ ಮೊದಲ ಬಾರಿಗೆ ಕ್ಯಾಮೆರಾ ಮುಂದೆ ನಿಂತಿದ್ದು, ಹೊಸ ಅನುಭವ ಖುಷಿ ತಂದಿದೆ ಎಂದು ಹೇಳಿದ್ದಾರೆ.