ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೆರಳುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭಿರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನಿಂದ ಬೆಳಗಾವಿಗೆ ರಸ್ತೆ ಮೂಲಕ ಕಾರಿನಲ್ಲಿ ಹೊರಟ್ಟಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಹೋದರ ಎಂಎಲ್ ಸಿ ಚನ್ನರಾಜ ಹಟ್ಟಿಹೋಳಿ ಪ್ರಯಾಣಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.
ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಕೂಡ ಗಾಯಗೊಂಡಿದ್ದಾರೆ. ಇಬ್ಬರೂ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯದ ಬಗ್ಗೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ನೀಡಿದ್ದು, ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಬೆನ್ನಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಭುಜಕ್ಕೂ ಗಾಯಗಳಾಗಿವೆ. ಬೆನ್ನಿನ ಭಾಗದಲ್ಲಿ ಪ್ಯಾಕ್ಚರ್ ಆಗಿದೆ. ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.
ಆಪರೇಷನ್ ಅಗತ್ಯವಿಲ್ಲ. ಚಿಕಿತ್ಸೆ ಮೂಲಕ ಸರಿಪಡಿಸಲಾಗುವುದು. ಲಕ್ಷ್ಮೀ ಹೆಬ್ಬಾಳಕರ್ ಒಂದು ತಿಂಗಳು ವಿಶ್ರಾಂತಿ ಪಡೆಯುವ ಅಗತ್ಯವಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.