ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಪೂರೈಸಲು ಸಾರಿಗೆ ನಿಗಮಗಳ ಆಸ್ತಿ ಮಾರಾಟ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಬಿಬಿಎಂಪಿಯನ್ನೇ ಅಡ ಇಟ್ಟಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನಸೌಧ ಒಂದನ್ನ ಬಿಟ್ಟು ಬಹುತೇಕ ಆಸ್ತಿಪಾಸ್ತಿಗಳನ್ನು ಬಿಜೆಪಿಯವರು ಅಡವಿಟ್ಟಿದ್ದರು ಎಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅವರು ಆರ್ಥಿಕ ತಜ್ಞ ಎಂದೇ ಹೆಸರುಗಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 58 ಸಾವಿರ ಕೋಟಿ ಮೀಸಲಿಟ್ಟಿದ್ದರೂ ಯಾವುದೇ ಸಾಲ ಹೊರೆ ಹೊರಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ತುಂಬಾ ಚೆನ್ನಾಗಿ ನಡೆಯುತ್ತಿದೆ ಎಂದು ಹೇಳಿದರು.