alex Certify ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಲು ವಿತರಣೆ ಸ್ಥಗಿತ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ಹಾಲು ವಿತರಣೆ ಸ್ಥಗಿತ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಹಾಲು ವಿತರಣೆ ಸ್ಥಗಿತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಕಳೆದ ನಾಲ್ಕು ತಿಂಗಳಿಂದ ಹಾಲು ಪೂರೈಕೆ ಆಗುತ್ತಿಲ್ಲ. ಹಾಲಿನ ಬೆಲೆ ಹೆಚ್ಚಳವಾದ ಕಾರಣ ಹಿಂದಿನ ಬೆಲೆಯಲ್ಲಿ ಹಾಲಿನ ಪೌಡರ್ ಕೊಡಲು ಆಗುವುದಿಲ್ಲ ಎಂದು  ಕೆಎಂಎಫ್ ನವರು   ಹಾಲು ವಿತರಣೆ ಮಾಡುವುದನ್ನು ನಿಲ್ಲಿಸಿದ್ದಾರೆ. ಹಾಲಿನ ಪೌಡರ್ ಕೊಡಲು ಆಗದಿದ್ದರೆ ಬೇರೆ ಪೌಷ್ಟಿಕ ಆಹಾರ ಕೊಡುವ ಬಗ್ಗೆ ಚರ್ಚೆ ಮಾಡಿ ಒಂದು ನಿರ್ಧಾರಕ್ಕೆ ಬರುತ್ತೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆಯ ವೆಚ್ಚವನ್ನ ಸರ್ಕಾರವೇ ಭರಿಸಲಿದೆ : ಲಕ್ಷ್ಮೀ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಯ ವೆಚ್ಚವನ್ನ ಸರ್ಕಾರವೇ ಭರಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇವಾ ಕೇಂದ್ರಗಳಿಗೆ ಇಲಾಖೆಯಿಂದಲೇ ಅರ್ಜಿಗೆ 20 ರೂ. ನೀಡುತ್ತೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.

ಅರ್ಜಿ ಸಲ್ಲಿಸುವ ವೇಳೆ ಮಧ್ಯವರ್ತಿಗಳ ಆಮಿಷಗಳಿಗೆ ಮಹಿಳೆಯರು ಕಿವಿಗೊಡಬಾರದು. ಅರ್ಜಿ ಸಲ್ಲಿಕೆ ವೇಳೆ ಯಾರೂ ಒಂದು ರೂಪಾಯಿಯನ್ನೂ ಕೊಡಬೇಡಿ. ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಯಾವುದೇ ಲಾಸ್ಟ್ ಡೇಟ್ ಇಲ್ಲ, ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ನಿರಂತರವಾಗಿ ಇರಲಿದೆ ಎಂದು ಹೇಳಿದರು. ಅರ್ಜಿ ಸಲ್ಲಿಕೆ ವೇಳೆ ಯಾರಿಗೂ ಕೂಡ 1 ರೂಪಾಯಿ ಕೂಡಬೇಡಿ ಅರ್ಜಿ ಸಲ್ಲಿಸುವ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದರು.5 ಕೆಜಿ ಅಕ್ಕಿ ಬದಲು ಹಣ ನೀಡಲು ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ . ಅಕ್ಕಿ ಕೊರತೆ ಹಿನ್ನೆಲೆ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡಲು ನಿರ್ಧರಿಸಲಾಗಿದೆ. 1ಕೆಜಿ ಅಕ್ಕಿಗೆ 34 ರೂ ನೀಡಲು ನಿರ್ಧಾರ ಮಾಡಲಾಗಿದೆ. ಜುಲೈ 1 ರಿಂದಲೇ ಬಿಪಿಎಲ್ ಕಾರ್ಡ್ ದಾರರಿಗೆ ಹಣ ಜಮಾ ಮಾಡಲಾಗುತ್ತದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...