
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಟ್ & ರನ್ ಮಾಡಿ ಪರಾರಿಯಾದ ಕ್ಯಾಂಟರ್ ಗಾಗಿ ಪೊಲೀಸರು ಹುಡುಕಾಟ ತೀವ್ರಗೊಳಿಸಿದ್ದಾರೆ.
ಹಿಟ್ & ರನ್ ಮಾಡಿ ಎಸ್ಕೇಪ್ ಆಗಿರುವ ಕ್ಯಾಂಟರ್ ಹರಿಯಾಣ ಅಥವಾ ಪಂಜಾಬ್ ಮೂಲದ ವಾಹನ ಎಂದು ತಿಳಿದುಬಂದಿದೆ. ಹಿರೇಬಾಗೇವಾಡಿ ಟೋಲ್ ನಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯ ಆಧರಿಸಿ ಪೊಲೀಸರಿ ಈಗಗಲೇ 60 ಕ್ಯಾಂಅರ್ ವಾಹನಗಳ ಮಾಹಿತಿ ಸಂಗ್ರಹಿಸಿದ್ದಾರೆ. 30 ವಾಹನಗಳನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ.
ಜ.14ರಂದು ಮುಂಜಾನೆ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಗಊ ಸಹೋದರ ಚನ್ನರಾಜ ಹಟ್ಟಿಹೊಳಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು, ಕಾರು ಮರಕ್ಕೆ ಗುದ್ದಿದ್ದು, ಅಪಘಾತದಲ್ಲಿ ಸಚಿವರು ಗಂಭೀರವಾಗಿ ಗಾಯಗೊಂಡಿದ್ದರು.