ಚಿಕ್ಕಮಗಳೂರು: ಗೃಹಲಕ್ಷ್ಮಿ ಯೋಜನೆಗೆ ಗೃಹಿಣಿಯರ ಖಾತೆಗೆ ಆಗಸ್ಟ್ 17 ಅಥವಾ 18 ರೊಳಗೆ 2000 ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಗೌರಿಗದ್ದೆ ದತ್ತಾಶ್ರಮದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಲಾಗುವುದು ಎಂದರು.
ಯೋಜನೆಯ ಫಲಾನುಭವಿಗಳು ತಂತ್ರಾಂಶದಲ್ಲಿ ಹೆಸರು ನೋಂದಾಯಿಸಲು ಅಧಿಕಾರಿಗಳು ಪೂರಕವಾದ ಅಪ್ಲಿಕೇಶನ್ ತಯಾರಿಸುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಯೋಜನೆ ಅನುಷ್ಠಾನಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಆಗಸ್ಟ್ 17 ಅಥವಾ 18 ರೊಳಗೆ ಮಹಿಳೆಯರ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.