ಬೆಂಗಳೂರು: ಎಲ್ಲಾ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ ಪಟ್ಟಿ ನೀಡಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ.
ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ ಗುರುತಿಸಿ ಪಟ್ಟಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
ನೂರಾರು ಅಂಗನವಾಡಿ ಕಟ್ಟಡಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅಂತಹ ಅಂಗನವಾಡಿಗಳನ್ನು ಗುರುತಿಸಿಸಲು ತಿಳಿಸಲಾಗಿದೆ. ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಲಭ್ಯವಿರುವ ನಿವೇಶನಗಳನ್ನು ಗುರುತಿಸುವಂತೆ ಸೂಚನೆ ನೀಡಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಸ್ವಂತ ಕಟ್ಟಡಗಳಲ್ಲಿ ಎಲ್ಲಾ ಅಂಗನವಾಡಿಗಳು ಕಾರ್ಯನಿರ್ವಹಿಸುವಂತೆ ರೂಪುರೇಷೆ ಸಿದ್ದಪಡಿಸುವುದಾಗಿ ಸಚಿವರು ಮಾಹಿತಿ ನೀಡಿದ್ದಾರೆ.