ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಅಬ್ಂಧಿಸಿದಂತೆ ಸಿಐಡಿ ತನಿಖೆ ಆರಂಭವಾಗಿದೆ. ತನಿಖಾ ತಂಡಕ್ಕೆ ಮಾಹಿತಿ ನೀಡಿದ ಬಳಿಕ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಸಿಐಡಿ ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ. ಕಾನೂನು ಚೌಕಟ್ಟಿನಲ್ಲಿ ಏನಾಗಬೇಕು ಅದು ಆಗುತ್ತೆ. ನನಗೆ ಅನ್ಯಾಯ ಆಗಿದೆ, ಇದು ಇಡೀ ಮನುಕುಲಕ್ಕೆ ಆಗಿರುವ ಅನ್ಯಾಯ. ನನ್ನ ಜೊತೆ ಎಲ್ಲರೂ ನಿಂತುಕೊಳ್ಳಬೇಕು ಎಂದರು.
ಪ್ರಕರಣವನ್ನು ಪ್ರತಿಷ್ಠೆಯಾಗಿ, ರಾಜಕೀಯವಾಗಿ ತೆಗೆದುಕೊಂಡಿಲ್ಲ. ನನಗೆ ಅನ್ಯಾಯ ಆಗಿದೆ. ಇದು ನನ್ನ ಸ್ವಾಭಿಮಾನದ ಪ್ರಶ್ನೆ. ತನಿಖೆ ಈಗಷ್ಟೇ ಆರಂಭವಾಗಿದೆ. ತನಿಖೆ ಸೂಕ್ತ ರೀತಿಯಲ್ಲಿ ನಡೆಯಲಿ. ಈ ಹಂತದಲ್ಲಿ ಹೆಚ್ಚು ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.