alex Certify ಸಿಡಿ ಬಹಿರಂಗ ವಿಚಾರಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ: ಏನೂ ಮಾತಾಡಲ್ಲ ಎಂದ್ರು ಶಾಸಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಬಹಿರಂಗ ವಿಚಾರಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ: ಏನೂ ಮಾತಾಡಲ್ಲ ಎಂದ್ರು ಶಾಸಕಿ

ಹುಬ್ಬಳ್ಳಿ: ಸಿಡಿ ಬಹಿರಂಗ ವಿಚಾರದಲ್ಲಿ ನಾನು ಏನೂ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ವಿಚಾರದಲ್ಲಿ ನನ್ನ ಹೆಸರನ್ನು ಏಕೆ ಎಳೆದು ತರುತ್ತಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ರಾಜಕಾರಣಿಗಳು ಮತ್ತೊಬ್ಬರಿಗೆ ಮಾದರಿಯಾಗುವಂತೆ ಇರಬೇಕು. ತನಿಖೆಯ ನಂತರ ಸತ್ಯಾಂಶ ಗೊತ್ತಾಗುತ್ತದೆ. ನಾನು ಆ ವಿಚಾರದಲ್ಲಿ ಏನು ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಗೋಕಾಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿರುವುದಕ್ಕೆ ಅದು ಏಕೆ ಪ್ರಸ್ತಾಪಿಸಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅದರ ಬಗ್ಗೆ ಏನೂ ಮಾತಾಡಲ್ಲ. ಬೇರೆ ಏನಾದರೂ ಕೇಳಿ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...