alex Certify ಯಜಮಾನಿಯರಿಗೆ ಗುಡ್ ನ್ಯೂಸ್ : `BPL’ ಕಾರ್ಡ್ ರದ್ದಾದರೂ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಜಮಾನಿಯರಿಗೆ ಗುಡ್ ನ್ಯೂಸ್ : `BPL’ ಕಾರ್ಡ್ ರದ್ದಾದರೂ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ

ಬೆಳಗಾವಿ: ಬಿಪಿಎಲ್ ಕಾರ್ಡ್ ರದ್ದಾದರೂ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಮಾಡಲಾಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಬರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಗೆ ಅರ್ಹವಲ್ಲದ ಕಾರ್ಡ್ ಗಳನ್ನು ಮಾತ್ರ ಎಪಿಎಲ್ ಗೆ ಬದಲಾವಣೆ ಮಾಡಲಾಗಿದೆ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾಗಿದ್ದರೂ ತೆರಿಗೆ ಪಾವತಿಸಿದರೆ ಗೃಹಲಕ್ಷ್ಮಿ ಹಣ ಬರುವುದಿಲ್ಲ. ತೆರಿಗೆ ಪಾವತಿಸದಿದ್ದರೆ ಮಾತ್ರ ಹಣ ಖಾತೆಗೆ ಜಮಾ ಆಗಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡ್ ಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಬಿಪಿಎಲ್ ಕಾರ್ಡ್, ಎಪಿಎಲ್ ಕಾರ್ಡ್ ಇದ್ದವರಿಗೆ ಗೃಹಲಕ್ಷ್ಮಿ ಹಣ ಬಂದೇ ಬರುತ್ತದೆ. ಈ ಬಗ್ಗೆ ಗೊಂದಲ ಬೇಡ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...