ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಯರ ಖಾತೆಗೆ ಮಾಸಿಕ 2,000 ರೂ. ಜಮಾ ಮಾಡಲಾಗುತ್ತಿದೆ.
ಆದರೆ, ಅರ್ಜಿ ಸಲ್ಲಿಸಿದ ಲಕ್ಷಾಂತರ ಮಹಿಳೆಯರ ಖಾತೆಗೆ ಇನ್ನೂ ಹಣ ಜಮಾ ಆಗಿಲ್ಲ. ಈ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಸಿದವರ ಪೈಕಿ 3082 ಅರ್ಜಿದಾರರು ಮೃತಪಟ್ಟಿರುವುದರಿಂದ ಅವರನ್ನು ಅನರ್ಹಗೊಳಿಸಲಾಗಿದೆ.
1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ.
5,96,268 ಫಲಾನುಭವಿಗಳ ಖಾತೆಗೆ ಆಧಾರ್ ಜೋಡಣೆಯಾಗಿಲ್ಲ.
1,75,693 ಫಲಾನುಭವಿಗಳ ಹೆಸರು ಮತ್ತು ವಿಳಾಸದಲ್ಲಿ ವ್ಯತ್ಯಾಸವಿದೆ.
ಫಲಾನುಭವಿಗಳ ಆಧಾರ್ ಮತ್ತು ಬ್ಯಾಂಕ್ ಖಾತೆ, ವಿಳಾಸ, ಹೆಸರಿನಲ್ಲಿ ವ್ಯತ್ಯಾಸ, ಆಧಾರ್ ಜೋಡಣೆ, ಸರಿಪಡಿಸುವ ಕಾರ್ಯ ಮಾಡಲಾಗುತ್ತಿದೆ. ಬ್ಯಾಂಕುಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ಕೈಗೊಂಡಿದೆ.
ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾ ಸಿಂಧು ಮೂಲಕ ಪುನರ್ ಪರಿಶೀಲಿಸಲಾಗುತ್ತಿದೆ. ಅಕ್ಟೋಬರ್ 4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2ಡು ಸಾವಿರ ರೂ. ವರ್ಗಾವಣೆ ಮಾಡಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಲಾಗಿದ್ದು, ನೇರ ನಗದು ವರ್ಗಾವಣೆ ಮೂಲಕ ಅವರ ಖಾತೆಗಳಿಗೆ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ.