ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೇಟಿಂಗ್ ವುಮೆನ್ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಜಮನಾಳ ಗ್ರಾಮದಲ್ಲಿ ಮಾತನಾಡಿದ ಅವರು, ನನ್ನ ಹಿತೈಷಿಗಳಿಂದ ಆಕೆಯ ಬಗ್ಗೆ ಮಾತನಾಡದಂತೆ ವಾರ್ನಿಂಗ್ ಮಾಡಲಾಗಿದೆ. ಆಕೆ ಏನೇ ಮಾಡಿದರೂ ಮಾರ್ಕೆಟಿಂಗ್ ಮಾಡಿಕೊಳ್ಳುತ್ತಾರೆ. ನನ್ನನ್ನು ಯಾರು ಮಂತ್ರಿ ಮಾಡಿದ್ದಾರೆ ಎಂದು ಮುಂದೆ ಹೇಳುತ್ತೇನೆ. ಸಿದ್ದರಾಮಯ್ಯ ಅವರನ್ನು ಕೇಳಿ ಯಾರು ಮಂತ್ರಿ ಮಾಡಿದ್ದು ಎಂದು ತಿಳಿಸಿದ್ದಾರೆ.
ಗೋಕಾಕ ಕ್ಷೇತ್ರಕ್ಕೆ ಯಾರು ಬಂದರೂ ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೋಕಾಕ್ ನಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಅವರು ಮಾತನಾಡಿ, ಯಾರು ಬಂದರೂ ಸ್ವಾಗತಿಸುತ್ತೇನೆ ಎಂದು ತಿಳಿಸಿದ್ದಾರೆ.