alex Certify ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಸಾಹುಕಾರ್ ಶಪಥ: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಸಾಹುಕಾರ್ ಶಪಥ: ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಗ್ರ್ಯಾಂಡ್ ಎಂಟ್ರಿ

ಬೆಳಗಾವಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೋಲಿಸಲು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರಕ್ಕೆ ರಮೇಶ್ ಜಾರಕಿಹೊಳಿ ಗ್ರಾಂಡ್ ಎಂಟ್ರಿ ಕೊಟ್ಟಿದ್ದು, ಗ್ರಾಮಾಂತರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ,

ಸುಳೇಬಾವಿಯಲ್ಲಿ ರಮೇಶ್ ಜಾರಕಿಹೊಳಿ ಅಭಿಮಾನಿಗಳು ಸಮಾವೇಶ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದ ಮೈದಾನದಲ್ಲಿ ಸಮಾವೇಶ ನಡೆಸಲಾಗಿದೆ. ಅಭಿಮಾನದ ಕಾರ್ಯಕರ್ತರ ಸಮಾವೇಶದ ಹೆಸರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪುಷ್ಪಾರ್ಚನೆ ಮೂಲಕ ರಮೇಶ್ ಜಾರಕಿಹೊಳಿಗೆ ಅದ್ದೂರಿ ಸ್ವಾಗತ ನೀಡಲಾಗಿದೆ.

ರಮೇಶ್ ಜಾರಕಿಹೊಳಿ ಆಪ್ತ ನಾಗೇಶ್ ಮನ್ನೋಳ್ಕರ್ ಸಾಥ್ ನೀಡಿದ್ದಾರೆ. ನಾಗೇಶ್ ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಪಕ್ಷದ ಬ್ಯಾನರ್ ನಲ್ಲಿ ಅಧಿಕೃತವಾಗಿ ಕಾರ್ಯಕ್ರಮ ಆಯೋಜಿಸದ ಹಿನ್ನೆಲೆಯಲ್ಲಿ ಉಳಿದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಕಾರ್ಯಕ್ರಮಕ್ಕೆ ಗೈರುಹಾಜರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...